ಬೈಲಹೊಂಗಲ: ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಓರ್ವ ಧ್ವಿಚಕ್ರ ವಾಹನ ಕಳ್ಳನನ್ನು ಪೊಲೀಸರು ಬಂಧಿಸಿ ಆತನಿಂದ ₹ 1.5 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಆಜಾದ ಮೆಹಬೂಬಸುಭಾನಿ ಕೀಲ್ಲೆದಾದ ಬಂಧಿತ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಆಜಾದನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಸಮಯದಲ್ಲಿ ಇನ್ನೂ ಬೇರೆ ಬೇರೆ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿರುವ ಕುರಿತು ಮಾಹಿತಿ ನೀಡಿದ್ದಾನೆ. ನಂತರ ಕಳ್ಳತನ ಮಾಡಲಾಗಿರುವ ವಾಹನಗಳ ಪತ್ತೆ ಕಾರ್ಯ ನಡೆಸಿ ₹ 1.5 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಎಸ್. ಆರ್. ಮುತ್ತತ್ತಿ ಮತ್ತು ಅವಿನಾಶ ಯರಗೊಪ್ಪ, ಸಿಬ್ಬಂದಿ ಅರುಣ ಕಾಂಬಳೆ , ಎಸ್.ಬಿ ಬಾಬಣ್ಣವರ, ಪ್ರಭಾಕರ ಭೂಸಿ, ರಾಜು ಕೆಳಗಿನಮನಿ ತಾಂತ್ರಿಕ ವಿಭಾಗದ ಸಿಬ್ಬಂದಿ ರಮೇಶ್ ಅಕ್ಕಿ, ಮಹದೇವ್ ಕಾಶಿದ ಪಾಲ್ಗೊಂಡಿದ್ದರು.
————