ಹುಬ್ಬಳ್ಳಿ :ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಹಲವು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಬಿಜೆಪಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ಭಾರೀ ತಂತ್ರಕ್ಕೆ ರೂಪಿಸಿದೆ. ವಿನಯ ಕುಲಕರ್ಣಿ ಹೆಸರು ಕೇಳಿಬರುತ್ತಿದ್ದಂತೆಯೇ ಬದಲಾದ ಶಿಗ್ಗಾಂವಿ ರಾಜಕೀಯ ಚಿತ್ರಣ, ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಸಿಎಂ ಒಂದು ವೇಳೆ ಪಂಚಮಸಾಲಿ ಮಠಾಧೀಶರು ಶ್ರೀ ಬಸವಜಯ ಮೃತುಂಜಯ ಸ್ವಾಮೀಜಿ ಶಿಗ್ಗಾಂವಿ ಕ್ಷೇತ್ರದಲ್ಲಿ ನಮಗೆ ಅನ್ಯಾಯ ಮಾಡಿದವರ ವಿರುದ್ಧ ಪ್ರಚಾರ ಕೈಕೊಂಡರೆ ಶಿಗ್ಗಾಂವಿ ಮತಕ್ಷೇತ್ರದ ರಾಜಕೀಯ ಚಿತ್ರಣ ಬದಲಾಗುವ ಸಾಧ್ಯತೆಗಳಿವೆ. ಏಕೆಂದರೆ ವಿನಯ್ ಕುಲಕರ್ಣಿ ಪಂಚಮಸಾಲಿ ಸಮಾಜದ ಪ್ರಭಾವಿ ನಾಯಕ ಆದ ಕಾರಣ ಪಂಚಮಸಾಲಿ ಶ್ರೀಗಳು ವಿನಯ್ ಕುಲಕರ್ಣಿ ಪರವಾಗಿ ಪ್ರಚಾರ ಮಾಡಲೇಬೇಕಾಗುತ್ತದೆ. ಆದ ಕಾರಣ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲ್ಲುವ ಅಷ್ಟು ಸುಲಭವಲ್ಲ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಪಂಚಮಸಾಲಿ ಮತಗಳು ಹೆಚ್ಚಿವೆ. ಹೀಗಾಗಿ ಕಾಂಗ್ರೆಸ್ ಪಂಚಮಸಾಲಿ ಸಮುದಾಯದ ನಾಯಕ ವಿನಯ್ ಕುಲಕರ್ಣಿ ಕಣಕ್ಕಿಳಿಸುವ ಪ್ಲಾನ್ ಮಾಡಿದೆ. ವಿನಯರ್ ಕುಲಕರ್ಣಿ ಹೆಸರು ಹೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿಯಲ್ಲಿ ರಾಜಕೀಯ ಚಿತ್ರಣ ಬದಲಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರಗಳು ನಡೆದಿವೆ.
ಅದರಲ್ಲು ಸಿಎಂ ಶಿಗ್ಗಾಂವಿ ಕ್ಷೇತ್ರದಲ್ಲಿ ಲಾಭ-ನಷ್ಟದ ಬಗ್ಗೆ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಪಂಚಮಸಾಲಿ ಹಾಗೂ ಮುಸ್ಲಿಂ ಮತಗಳು ನಿರ್ಣಾಯಕವಾಗಿವೆ. ಪಂಚಮಸಾಲಿ ಸಮಾಜದ 65 ಸಾವಿರ ಮತಗಳಿದ್ದರೆ, 50 ಸಾವಿರ ಮುಸ್ಲಿಂ ಮತಗಳಿವೆ.ಎಸ್ಸಿ 20 ಸಾವಿರ, ಎಸ್ಟಿ17 ಸಾವಿರ, ಕುರುಬ 20 ಸಾವಿರ ಮತಗಳಿವೆ.
ವಿನಯ್ ಕುಲಕರ್ಣಿ ಶಿಗ್ಗಾಂವಿಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಕೇಳುತ್ತಿದ್ದಂತೆಯೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪ್ತರು ಲಾಭ-ನಷ್ಟದ ಲೆಕ್ಕಚಾರಗಳನ್ನು ಹಾಕುತ್ತಿದ್ದಾರೆ. ವಿನಯ್ ಕುಲಕರ್ಣಿ ಕಾಂಗ್ರೆಸ್ ಅಭ್ಯರ್ಥಿಯಾದರೆ ಪಂಚಮಸಾಲಿ ಮತಗಳು ಕಾಂಗ್ರೆಸ್ ಪಾಲಾಗುವ ವಾಲುವ ಭಯ ಬಿಜೆಪಿಗೆ ಶುರುವಾಗಿದೆ.
ಒಂದು ವೇಳೆ ವಿನಯ್ ಕುಲಕರ್ಣಿ ಶಿಗ್ಗಾಂವಿ ಮತ ಕ್ಷೇತ್ರದಿಂದ ಸ್ಪರ್ಧಿಸಿದರೆ ಸಿಎಂ ಬೊಮ್ಮಾಯಿ ಅವರಿಗೆ ರಾಜ್ಯ ಪ್ರವಾಸ ಮಾಡುವುದು ಕಷ್ಟಕರವಾಗುತ್ತದೆ ಏಕೆಂದರೆ ಹೆಚ್ಚು ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಬಹುದಾದ ಸಂದರ್ಭ ಬರಬಹುದು ಆದ ಕಾರಣ ಶಿಗ್ಗಾವಿಯಲ್ಲಿ ಸಿಎಂ ಅವರನ್ನು ಕಟ್ಟಿಹಾಕಲು ಕಾಂಗ್ರೆಸ್ ಹೊಸ ಪ್ಲ್ಯಾನ್ ರೆಡಿ ಮಾಡಿದೆ.