ನವದೆಹಲಿ: ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟುಮಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಬಿಪೊರ್‌ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
‘ಬಿಪೊರ್ ಜಾಯ್’ ಚಂಡಮಾರುತದ ನಿರೀಕ್ಷೆಯಲ್ಲಿ, ಅರಬ್ಬಿ ಸಮುದ್ರದ ಕರಾವಳಿಯ ವಲ್ಸಾದ್‌ನ ತಿಥಾಲ್ ಬೀಚ್‌ನಲ್ಲಿ ಎತ್ತರದ ಎಲೆಗಳು ಉಂಟಾಗಿವೆ. ಮುಂಜಾಗ್ರತಾ ಕ್ರಮವಾಗಿ ತಿಥಾಲ್ ಬೀಚ್ ನ್ನು ಜೂನ್ 14 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ಮುಚ್ಚಲಾಗಿದೆ.
ಭಾರತೀಯ ಕಾಲಮಾನ ಜೂನ್ 9ರ ರಾತ್ರಿ 10.30ಕ್ಕೆ ಅತೀ ತೀವ್ರ ಚಂಡಮಾರುತ ‘ಬಿಪೊರ್ ಜಾಯ್’ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಬೀಸಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಟ್ವೀಟ್ ಮಾಡಿದೆ.