ಬೆಂಗಳೂರು: ಬಿಜೆಪಿ ಹೈಕಮಾಂಡ್ ಅಲೆದು-ತೂಗಿ 8 ಕ್ಷೇತ್ರಕ್ಕೆ ಪ್ರಬಲ ಪೈಪೋಟಿ ನೀಡುವ ಮಹಿಳೆಯರನ್ನು ಕಣಕ್ಕೆ ಇಳಿಸಿದ್ದು, ಬಿಜೆಪಿ ಲೆಕ್ಕಾಚಾರದ ಮೇಲೆ ಕಾಂಗ್ರೆಸ್ ಮುಂದಿನ ಹೆಜ್ಜೆ ಇಡುವ ಸಾದ್ಯತೆ.
ಬಿಜೆಪಿ ಮಂಗಳವಾರ ರಾತ್ರಿ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಅಭ್ಯರ್ಥಿಗಳ ಪೈಕಿ 8 ಮಹಿಳೆಯರಿಗೆ ಮಣೆ ಹಾಕಿದೆ.
ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ಸಂತೋಷ್ ನಾಯ್ಕ್ ಹಾಲಿ ಶಾಸಕರು.ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರೊಂದಿಗೆ 5 ಮಂದಿ ವಕೀಲರು, 9 ಮಂದಿ ವೈದ್ಯರು, ಒಬ್ಬರು ನಿವೃತ್ತ ಐಎಎಸ್, ಒಬ್ಬರು ಐಪಿಎಸ್ ಅಧಿಕಾರಿಗೆ ಟಿಕೆಟ್ ಘೋಷಣೆ ಮಾಡಿದೆ.
ಕಾಂಗ್ರೆಸ್ ಎಡರನೇ ಲಿಷ್ಟ್ ಬಿಡುಗಡೆ ಮಾಡಿದೆ- ಇನ್ನು ಕೇಲವು ಕ್ಷೇತ್ರದ ಟಿಕೆಟ್ ಗಳು ಬಾಕಿ ಉಳಿದುಕೊಂಡಿದ್ದ, ಬಿಜೆಪಿ ಕಣಕ್ಕೆ ಇಳಿಸಲಾದ ಕ್ಷೇತ್ರಕ್ಕೆ ಕಾಂಗ್ರೆಸ್ ತಂತ್ರ ರೂಪಿಸಿದೆ ಎನ್ನುವುದು ರೋಚಕ ನಡೆ.
ಯಾರಿಗೆ ಎಲ್ಲಿ ಬಿಜೆಪಿ ಟಿಕೆಟ್?
1. ನಿಪ್ಪಾಣಿ – ಶಶಿಕಲಾ ಜೊಲ್ಲೆ
2. ಹಿರಿಯೂರು – ಪೂರ್ಣಿಮಾ ಶ್ರೀನಿವಾಸ್
3. ಸವದತ್ತಿ – ರತ್ನಾ ವಿಶ್ವನಾಥ್ ಮಾಮನಿ
4. ಕಾರವಾರ – ರೂಪಾಲಿ ನಾಯ್ಕ್
5. ಸಂಡೂರು – ಶಿಲ್ಪಾ ರಾಘವೇಂದ್ರ
5. ನಾಗಮಂಗಲ – ಸುಧಾ ಶಿವರಾಮೇಗೌಡ
6. ಪುತ್ತೂರು – ಆಶಾ ತಿಮ್ಮಪ್ಪ ಗೌಡ
7. ಸುಳ್ಯ – ಭಾಗೀರಥಿ ಮುರುಳ್ಯ