This is the title of the web page
This is the title of the web page

ಕೇಂದ್ರ ಸಚಿವ ಅಮಿತ್ ಶಾ  ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.! ಬರ ಪರಿಹಾರಕ್ಕೆ ಸ್ಪಂದಿಸಿಲ್ಲ ಬಿಜೆಪಿಯವರಿಗೆ ಜನರು ಮತ ನೀಡಬೇಕೆ..? ಸಿಎಂ ಸಿದ್ದರಾಮಯ್ಯ  ಆಕ್ರೋಶ

ಕೇಂದ್ರ ಸಚಿವ ಅಮಿತ್ ಶಾ  ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.! ಬರ ಪರಿಹಾರಕ್ಕೆ ಸ್ಪಂದಿಸಿಲ್ಲ ಬಿಜೆಪಿಯವರಿಗೆ ಜನರು ಮತ ನೀಡಬೇಕೆ..? ಸಿಎಂ ಸಿದ್ದರಾಮಯ್ಯ  ಆಕ್ರೋಶ

 

ಮೈಸೂರು, ಏ, 2:ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೈಲೆವೆಲ್ ಕಮಿಟಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೋಟೀಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣಾ ಆಯೋಗ ನೀಡಿರುವ ನೋಟೀಸ್ ಗೆ ಉತ್ತರ ನೀಡಲಾಗಿದೆ. ಸಿಬಿಐ ನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ಮಂಡ್ಯದಲ್ಲಿ ಕುಮಾರಸ್ವಾಮಿಯವರು ಚುನಾವಣೆ ಎದುರಿಸುತ್ತಿರುವುದು ದೈವೇಚ್ಛೆ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಗನನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿ ಸೋಲನ್ನು ಅನುಭವಿಸಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರಿಂದ ಅವರು ಹಾಸನದಲ್ಲಿ ಗೆಲುವನ್ನು ಸಾಧಿಸಿದರು. ಈ ಬಾರಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂದು ಕಾರ್ಯಪ್ರವೃತ್ತರಾಗಿದ್ದು, ಹಾಸನದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎಂದರು.