ಬೆಂಗಳೂರು, ಜೂನ 17: ಬೆಳಗಾವಿ ಭಾಗಕ್ಕೆ ಮುಂಗಾರು ಮಾರುತಗಳು ವ್ಯಾಪಿಸಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 2ನೇ ವಾರದವರೆಗೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಜೂ.17 ಮತ್ತು 18ರಂದು ಸಾಧಾರಣ ಮಳೆಯಾಗಲಿದ್ದು, ಜೂ.19 ರಿಂದ 21ರವರೆಗೆ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18 ರಂದು ಮತ್ತು 19ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಮುಂಗಾರನ ಮಹಾ ಸ್ಟೋಟದ ಮುನ್ನೂಚನೆಯನ್ನ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ಕೊಟ್ಟಿದ್ದು, ಈ ಬೆಂಗಳೂರಿನಲ್ಲಿ ಜೂನ್ 17 ಮತ್ತು 18 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿದಿದೆ.
ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ಇನ್ನೂ ಜೂನ್ 19ರಂದು ಕೋಲಾರ, ಚಿಕ್ಕಬಳ್ಳಾಪುರದಲ್ಲೂ ವ್ಯಾಪಕ ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಗದಗ, ವಿಜಯನಗರ, ಬೆಳಗಾವಿ ಭಾಗಕ್ಕೆ ಮುಂಗಾರು ಮಾರುತಗಳು ವ್ಯಾಪಿಸಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 2ನೇ ವಾರದವರೆಗೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.