ಬೆಳಗಾವಿ : ಬೆಳಗಾವಿ ಜಿಲ್ಲಾಧ್ಯಂತ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ ಕಾಂಗ್ರೆಸ್ ಬಹುಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ.ಬೆಳಗಾವಿ ಜಿಲ್ಲೆಯಲ್ಲಿ 10 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ಕಳೆದ ಬಾರಿಯ ಬಂಡಾಯದಿಂದ ಸವದತ್ತಿ ಹಾಗೂ ರಾಯಬಾಗ ಕ್ಷೇತ್ರದವನ್ನು ಕಳೆದುಕೊಂಡಿದ್ದೇವು. ಆದರೆ ಈ ಸಾರಿ ಹೊಂದಾಣಿಕೆ ಮಾಡುವುದರ ಮೂಲಕ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ ಎಂದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಅತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, ಸವದತ್ತಿಯಲ್ಲಿಯೂ ಸಾಕಷ್ಟು ಗೊಂದಲ ಇದೆ. ಅದನ್ನು ಸಂಧಾನ ಮಾಡಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.
ರಾಮದುರ್ಗ ಮತಕ್ಷೇತ್ರದಲ್ಲಿ ಯಾವುದೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಇಲ್ಲ. ಕೆಲವರು ಸುದ್ದಿಗೋಷ್ಠಿ ನಡೆಸಿ ನಾನು ರಾಮದುರ್ಗದ ಬಂಡಾಯದ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿಲ್ಲ ಎಂದು ಹೇಳಿದರು.ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಯನ್ನು ಸ್ಥಳೀಯರಿಗೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಹೊರಗಿನಿಂದ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ರಾಜೇಂದ್ರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ಚಿಂಗಳೇ ಮುಂತಾದವರು ಇದ್ದರು