ಹುಕ್ಕೇರಿ: ಹುಕ್ಕೇರಿ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಎ.ಬಿ.ಪಾಟೀಲ ಅವರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ಉಮೇದುವಾರಿಕೆ ಸಲ್ಲಿಸಿದರು
ನಾಮಪತ್ರ ಸಲ್ಲಿಸುವ ಮುನ್ನವೇ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಕಾಂಗ್ರೆಸ್ ಅಭ್ಯರ್ಥಿ ಎ.ಬಿ.ಪಾಟೀಲ ಕೂಡ ಸಹಸ್ರಾರು ಕಾರ್ಯಕರ್ತರೊಂದಿಗೆ ತೆರೆದ ವಾಹನದಲ್ಲಿ ಕೋರ್ಟ್ ಸರ್ಕಲ್ನಿಂದ ತಹಸೀಲದಾರ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ದಾಖಲಿಸಿದರು. ಎಬಿಪಿಗೆ ಮಾಜಿ ಸಚಿವ ಶಶಿಕಾಂತ ನಾಯಿಕ, ಹಿರಿಯ ಮುಖಂಡ ಡಿ.ಟಿ.ಪಾಟೀಲ ಮತ್ತಿತರರು ಸಾಥ್ ನೀಡಿದರು.